ಪರಿಹಾರ ವಿತರಣೆಯಲ್ಲಿಯೂ ಜಾತಿವಾದ: ಟಿ. ಎ. ನಾರಾಯಣಗೌಡ
ಬೆಳಗಾವಿ: ಉತ್ತರ ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದಾಗಿ ಸಾವಿರಾರು ಕುಟುಂಬಗಳು ಬೀದಿ ಪಾಲಾಗಿವೆ. ಸರ್ಕಾರ ತೆರೆದಿರುವ ಗಂಜಿ ಕೇಂದ್ರಗಳಲ್ಲಿ ಗಂಜಿ ಬತ್ತಿ ಹೋಗಿದೆ. ನಿಜವಾಗಿಯೂ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಿಗಬೇಕಾಗಿರುವ ಜೀವನಾವಶ್ಯಕ ವಸ್ತುಗಳು ಸಿಗದೆ ಸಂತ್ರಸ್ತರು ಪರದಾಡುತ್ತಿದ್ದಾರೆ. ನೊಂದವರ ನೆರವಿಗೆ ಧಾವಿಸಬೇಕಾದ ಸರ್ಕಾರ ಕೋಟ್ಯಾಂತರ ರೂಪಾಯಿ ಸಂಗ್ರಹಿಸುವುದರಲ್ಲಿಯೇ ಕಾಲಹರಣ ಮಾಡುತ್ತಿದೆ. ಪರಿಹಾರ ವಿತರಣೆಯಲ್ಲಿ ಜಾತಿವಾದ ಮಾಡಿ ತಾರತಮ್ಯ ನೀತಿಯನ್ನು ಅನುಸರಿಸುತ್ತಿದೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರು ಇಂದಿಲ್ಲಿ ಆರೋಪಿಸಿದರು. ಬೆಳಗಾವಿ ಜಿಲ್ಲೆಯಲ್ಲಿ ನೆರೆ ಹಾವಳಿಯಿಂದ ಮೃತಪಟ್ಟವರ ಕುಟುಂಬಗಳಿಗೆ [...] [...more]
